Text copied!
Bibles in Kannada

ಅ. ಕೃ. 2:11-19 in Kannada

Help us?

ಅ. ಕೃ. 2:11-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12 ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13 ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19 ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
ಅ. ಕೃ. 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019