Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 2

ಅ. ಕೃ. 2:12-25

Help us?
Click on verse(s) to share them!
12ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
21ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.

Read ಅ. ಕೃ. 2ಅ. ಕೃ. 2
Compare ಅ. ಕೃ. 2:12-25ಅ. ಕೃ. 2:12-25