Text copied!
Bibles in Kannada

ಅ. ಕೃ. 2:13-17 in Kannada

Help us?

ಅ. ಕೃ. 2:13-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಅ. ಕೃ. 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019