Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 2

ಅ. ಕೃ. 2:2-13

Help us?
Click on verse(s) to share them!
2ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
5ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
6ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
7ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
8ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
9ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
11ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.

Read ಅ. ಕೃ. 2ಅ. ಕೃ. 2
Compare ಅ. ಕೃ. 2:2-13ಅ. ಕೃ. 2:2-13