Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 2

ಅ. ಕೃ. 2:33-40

Help us?
Click on verse(s) to share them!
33ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
36“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
37ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
38ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
39ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
40ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.

Read ಅ. ಕೃ. 2ಅ. ಕೃ. 2
Compare ಅ. ಕೃ. 2:33-40ಅ. ಕೃ. 2:33-40