Text copied!
Bibles in Kannada

ಅ. ಕೃ. 3:4-14 in Kannada

Help us?

ಅ. ಕೃ. 3:4-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.
5 ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
6 ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
7 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.
8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
10 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.
11 ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
12 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
13 ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
14 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
ಅ. ಕೃ. 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019