Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 4

ಅ. ಕೃ. 4:1-17

Help us?
Click on verse(s) to share them!
1ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
2ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
3ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
4ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
5ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
6ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
7ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
8ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
9ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
11“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
13ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
14ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
15ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,
16“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
17ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

Read ಅ. ಕೃ. 4ಅ. ಕೃ. 4
Compare ಅ. ಕೃ. 4:1-17ಅ. ಕೃ. 4:1-17