Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 7

ಅ. ಕೃ. 7:2-12

Help us?
Click on verse(s) to share them!
2ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
3‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
4“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
5ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
6ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
7ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
8ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
9“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
10ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
11“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
12ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.

Read ಅ. ಕೃ. 7ಅ. ಕೃ. 7
Compare ಅ. ಕೃ. 7:2-12ಅ. ಕೃ. 7:2-12