2ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
3‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
4“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
5ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
6ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
7ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
8ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
9“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
10ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
11“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
12ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
13ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
14ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
15ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.
16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
17“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
18ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.
19ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.
20ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
21ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
22ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
23“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
24ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
25ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
26ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
27“ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
30“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,