Text copied!
Bibles in Kannada

ಅ. ಕೃ. 7:29-35 in Kannada

Help us?

ಅ. ಕೃ. 7:29-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‍ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
30 “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
32 ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
33 ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
34 ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
ಅ. ಕೃ. 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019