Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 7

ಅ. ಕೃ. 7:31-45

Help us?
Click on verse(s) to share them!
31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
32‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
33ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
34ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
35“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
36ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
37“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
38ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
39“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
40“ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
42ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
43ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
44“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
45ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.

Read ಅ. ಕೃ. 7ಅ. ಕೃ. 7
Compare ಅ. ಕೃ. 7:31-45ಅ. ಕೃ. 7:31-45