Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 7

ಅ. ಕೃ. 7:45-52

Help us?
Click on verse(s) to share them!
45ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
46ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
47ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
48ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
49“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.
51“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
52ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

Read ಅ. ಕೃ. 7ಅ. ಕೃ. 7
Compare ಅ. ಕೃ. 7:45-52ಅ. ಕೃ. 7:45-52