Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 7

ಅ. ಕೃ. 7:49-57

Help us?
Click on verse(s) to share them!
49“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.
51“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
52ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
53ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.
54ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
55ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
56“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.
57ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,

Read ಅ. ಕೃ. 7ಅ. ಕೃ. 7
Compare ಅ. ಕೃ. 7:49-57ಅ. ಕೃ. 7:49-57