Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 9

ಅ. ಕೃ. 9:16-24

Help us?
Click on verse(s) to share them!
16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.
17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
18ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
19ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.
20ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
21ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.
22ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
23ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
24ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

Read ಅ. ಕೃ. 9ಅ. ಕೃ. 9
Compare ಅ. ಕೃ. 9:16-24ಅ. ಕೃ. 9:16-24