Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 9

ಅ. ಕೃ. 9:22-32

Help us?
Click on verse(s) to share them!
22ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
23ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
24ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
25ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.
26ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
27ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
28ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.
29ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
30ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
31ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
32ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.

Read ಅ. ಕೃ. 9ಅ. ಕೃ. 9
Compare ಅ. ಕೃ. 9:22-32ಅ. ಕೃ. 9:22-32