Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 9

ಅ. ಕೃ. 9:3-19

Help us?
Click on verse(s) to share them!
3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.
4ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.
5ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;
6ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.
7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
9ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.
10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
11ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
12ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.
13ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
14ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
15ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.
16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.
17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.
18ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
19ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.

Read ಅ. ಕೃ. 9ಅ. ಕೃ. 9
Compare ಅ. ಕೃ. 9:3-19ಅ. ಕೃ. 9:3-19