Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 100

Help us?
Click on verse(s) to share them!
1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.