Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 109

ಕೀರ್ತ 109:8-16

Help us?
Click on verse(s) to share them!
8ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
9ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
10ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
11ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
12ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
13ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
14ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
15ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
16ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

Read ಕೀರ್ತ 109ಕೀರ್ತ 109
Compare ಕೀರ್ತ 109:8-16ಕೀರ್ತ 109:8-16