Text copied!
Bibles in Kannada

ಕೀರ್ತ 119:117-124 in Kannada

Help us?

ಕೀರ್ತ 119:117-124 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

117 ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
121 ಆಯಿನ್. ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019