Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:123-133

Help us?
Click on verse(s) to share them!
123ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
124ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
125ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
126ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
127ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
128ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
129ಪೆ. ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
131ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
132ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
133ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.

Read ಕೀರ್ತ 119ಕೀರ್ತ 119
Compare ಕೀರ್ತ 119:123-133ಕೀರ್ತ 119:123-133