Text copied!
Bibles in Kannada

ಕೀರ್ತ 119:150-157 in Kannada

Help us?

ಕೀರ್ತ 119:150-157 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.
151 ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
153 ರೇಷ್. ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019