155ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
156ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
157ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
158ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
159ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
160ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.