Text copied!
Bibles in Kannada

ಕೀರ್ತ 119:157-164 in Kannada

Help us?

ಕೀರ್ತ 119:157-164 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
158 ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
159 ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
160 ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
161 ಷಿನ್. ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
163 ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
164 ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019