Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:158-175

Help us?
Click on verse(s) to share them!
158ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
159ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
160ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
161ಷಿನ್. ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
162ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
163ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
164ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
166ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
167ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.
168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
169ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
171ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
172ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
173ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.
174ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
175ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.

Read ಕೀರ್ತ 119ಕೀರ್ತ 119
Compare ಕೀರ್ತ 119:158-175ಕೀರ್ತ 119:158-175