163ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
164ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
166ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
167ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.