168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
169ತಾವ್. ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.