170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
173 ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.
174 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
175 ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
176 ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.