Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 119

ಕೀರ್ತ 119:38-46

Help us?
Click on verse(s) to share them!
38ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
39ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ.
40ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
41ವಾವ್. ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
42ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
46ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.

Read ಕೀರ್ತ 119ಕೀರ್ತ 119
Compare ಕೀರ್ತ 119:38-46ಕೀರ್ತ 119:38-46