41ವಾವ್. ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
42ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
46ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.