44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
46ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
47ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.
48ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
49ಸಾಯಿನ್. ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
50ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
51ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.