Text copied!
Bibles in Kannada

ಕೀರ್ತ 119:46-52 in Kannada

Help us?

ಕೀರ್ತ 119:46-52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
47 ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.
48 ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
49 ಸಾಯಿನ್. ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
50 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
51 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
52 ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತೈಸಿಕೊಂಡಿದ್ದೇನೆ.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019