Text copied!
Bibles in Kannada

ಕೀರ್ತ 119:56-64 in Kannada

Help us?

ಕೀರ್ತ 119:56-64 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.
57 ಹೇತ್. ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
59 ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
60 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.
63 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.
64 ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019