Text copied!
Bibles in Kannada

ಕೀರ್ತ 119:85-92 in Kannada

Help us?

ಕೀರ್ತ 119:85-92 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
87 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
88 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.
89 ಲಾಮೆದ್. ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
ಕೀರ್ತ 119 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019