Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 124

Help us?
Click on verse(s) to share them!
1ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.
2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,
3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”
6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.