Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 128

Help us?
Click on verse(s) to share them!
1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
6ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.