Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 128

ಕೀರ್ತ 128:1-6

Help us?
Click on verse(s) to share them!
1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
6ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.

Read ಕೀರ್ತ 128ಕೀರ್ತ 128
Compare ಕೀರ್ತ 128:1-6ಕೀರ್ತ 128:1-6