Text copied!
Bibles in Kannada

ಕೀರ್ತ 129:1-6 in Kannada

Help us?

ಕೀರ್ತ 129:1-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾತ್ರಾಗೀತೆ. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.
2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.
3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”
4 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
ಕೀರ್ತ 129 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019