Text copied!
Bibles in Kannada

ಕೀರ್ತ 12:4-7 in Kannada

Help us?

ಕೀರ್ತ 12:4-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
ಕೀರ್ತ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019