1ಯಾತ್ರಾಗೀತೆ. ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
2ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
3“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
4ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
5ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.