9ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
10ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
13ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
14ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
15ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;