Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 133

Help us?
Click on verse(s) to share them!
1ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
2ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
3ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.