1ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
2ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
3ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.
4ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
5ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.