Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 135

ಕೀರ್ತ 135:5-12

Help us?
Click on verse(s) to share them!
5ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
11ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
12ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.

Read ಕೀರ್ತ 135ಕೀರ್ತ 135
Compare ಕೀರ್ತ 135:5-12ಕೀರ್ತ 135:5-12