6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.