Text copied!
Bibles in Kannada

ಕೀರ್ತ 135:7-18 in Kannada

Help us?

ಕೀರ್ತ 135:7-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.
15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,
17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
ಕೀರ್ತ 135 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019