1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
2ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
3ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
4ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.
5ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
6ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
7ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
8ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
9ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.