Text copied!
Bibles in Kannada

ಕೀರ್ತ 136:15-26 in Kannada

Help us?

ಕೀರ್ತ 136:15-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
17 ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.
18 ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
19 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
20 ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
21 ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
22 ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.
23 ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.
24 ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
25 ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.
26 ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
ಕೀರ್ತ 136 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019