1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
2ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
3ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.