1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.