15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
16ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
18ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
19ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
20ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
21ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
22ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.
23ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
24ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.